ಬ್ರೇಕಿಂಗ್ ನ್ಯೂಸ್
19-12-21 10:09 pm HK Desk news ಕ್ರೀಡೆ
ತಿರುವನಂತಪುರಂ, ಡಿ. 19: 'ಪಯ್ಯೋಲಿ ಎಕ್ಸ್ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ಪೊಲೀಸರು ಭಾರತದ 'ಚಿನ್ನದ ಹುಡುಗಿ' ಪಿ.ಟಿ ಉಷಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಉಷಾ ಮತ್ತು ಇತರ ಆರು ಮಂದಿ ಐಪಿಸಿ 420 (ವಂಚನೆ ಮತ್ತು ಅಪ್ರಾಮಾಣಿಕತೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಎಎನ್ಎಸ್ನೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.
"ಕೋಯಿಕ್ಕೋಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಜೋಸೆಫ್ ಅವರು ನೀಡಿದ ದೂರಿನ ಆಧಾರದ ಮೇಲೆ ಕ್ರಮ ಜರುಗಿಸಲಾಗಿದೆ. ಶುಕ್ರವಾರ ಪ್ರಕರಣ ದಾಖಲಾಗಿದ್ದು, ಶೀಘ್ರವೇ ತನಿಖೆ ಆರಂಭವಾಗಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹೊಸ ಅಪಾರ್ಟ್ಮೆಂಟ್ ಹೊಂದುವ ನಿರೀಕ್ಷೆಯಲ್ಲಿ ಜೆಮ್ಮಾ ಜೋಸೆಫ್ ಅವರು 46 ಲಕ್ಷ ರೂ.ಗಳನ್ನು ಉಷಾಗೆ ಪಾವತಿಸಿದ್ದಾರೆ. ಆದರೆ, ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವುದಾಗಿ ಉಷಾ ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ಜೋಸೆಫ್ ದೂರಿನಲ್ಲಿ ವಿವರಿಸಿದ್ದಾರೆ. ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಬಿಲ್ಡರ್ಗಳ ಮೇಲೆ ನಿಗಾ ಇಡುವ ನಿಯಂತ್ರಕ ಸಂಸ್ಥೆ ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವನ್ನು ದೂರುದಾರರು ಸಂಪರ್ಕಿಸಿದ್ದಾರೆ.
ಭಾರತದ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಕ್ಷೇತ್ರಗಳ ಸೆಲೆಬ್ರಿಟಿಗಳು ಬಿಜೆಪಿ ಸೇರಿದ್ದರು. ಆದರೆ, ಪಿ. ಟಿ ಉಷಾ ಸುದ್ದಿಯನ್ನು ಅಲ್ಲಗೆಳೆದಿದ್ದರು.
The Kozhikode Police in Kerala have registered a case against India’s ‘golden girl’ P.T. Usha and six others under Section IPC 420 (cheating and dishonesty) based on a complaint filed by a former athlete, Jemma Joseph.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm