ಬ್ರೇಕಿಂಗ್ ನ್ಯೂಸ್
25-04-22 12:55 pm Source: Vijayakarnataka ಕ್ರೀಡೆ
ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ ) ಟೂರ್ನಿಯ 70 ಲೀಗ್ ಪಂದ್ಯಗಳ ಪೈಕಿ 37 ಹಣಾಹಣಿಗಳು ಮುಕ್ತಾಯವಾಗಿವೆ. ಎರಡು ನೂತನ ಫ್ರಾಂಚೈಸಿಗಳು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ 2022ರ ಟೂರ್ನಿಯ ಪಾಯಿಂಟ್ಸ್ ಟೇಬಲ್ ಚಿತ್ರಣ ದಿನದಿಂದ ದಿನಕ್ಕೆ ಬದಲಾಗುತ್ತಿದೆ.
ಭಾನುವಾರದ ಪಂದ್ಯದ ಅಂತ್ಯಕ್ಕೆ ಗುಜರಾತ್ ಟೈಟನ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಹಾಗೂ ಲಖನೌ ಸೂಪರ್ ಜಯಂಟ್ಸ್ ತಂಡಗಳು ಪಾಯಿಂಟ್ಸ್ ಟೇಬಲ್ನಲ್ಲಿ ಕ್ರಮವಾಗಿ ಅಗ್ರ 4 ಸ್ಥಾನಗಳನ್ನು ಅಲಂಕರಿಸಿವೆ. ಪ್ಲೇಆಫ್ಸ್ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಎಲ್ಲಾ ತಂಡಗಳಿಗೆ ಮುಂದಿನ ಪಂದ್ಯಗಳು ನಿರ್ಣಾಯಕವಾಗಿವೆ.
ಐಪಿಎಲ್ ನಿಯಮದ ಪ್ರಕಾರ ಲೀಗ್ ಪಂದ್ಯಗಳ ಅಂತ್ಯಕ್ಕೆ ಪಾಯಿಂಟ್ಸ್ ಟೇಬಲ್ನಲ್ಲಿ ಅತಿ ಹೆಚ್ಚು ಅಂಕ ಹಾಗೂ ಅತ್ಯುತ್ತಮ ರನ್ರೇಟ್ ಹೊಂದಿರುವ ಅಗ್ರ ನಾಲ್ಕು ತಂಡಗಳು ಪ್ಲೇಆಫ್ಸ್ಗೆ ಅರ್ಹತೆ ಪಡೆಯಲಿವೆ. ಆದರೆ, ಯಾವ ನಾಲ್ಕು ತಂಡಗಳು ನಾಕೌಟ್ ಹಂತ ತಲುಪಲಿವೆ ಎಂದು ಈಗಲೇ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ.
ಪ್ರಸ್ತುತ ಪಾಯಿಂಟ್ಸ್ ಟೇಬಲ್, ರನ್ ರೇಟ್ ಹಾಗೂ ತಂಡಗಳ ಪ್ರದರ್ಶನದ ಆಧಾರದ ಮೇಲೆ ಗುಜರಾತ್ ಟೈಟನ್ಸ್, ಸನ್ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನ್ ರಾಯಲ್ಸ್, ಲಖನೌ ಸೂಪರ್ ಜಯಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇಆಫ್ಸ್ ರೇಸ್ನಲ್ಲಿ ಮುಂಚೂಣಿಯಲ್ಲಿವೆ.
ಇನ್ನುಳಿದ ತಂಡಗಳಾದ ಕೋಲ್ಕತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ಸ್ ತಲುಪಬೇಕೆಂದರೆ ಇನ್ನುಳಿದ ಪಂದ್ಯಗಳಲ್ಲಿ ಕಡ್ಡಾಯವಾಗಿ ಗೆಲುವು ಪಡೆಯಬೇಕು ಹಾಗೂ ತಮ್ಮ ರನ್ರೇಟ್ ಅನ್ನು ಉತ್ತಮಪಡಿಸಿಕೊಳ್ಳಬೇಕಾದ ಅಗತ್ಯವಿದೆ. ಆದರೆ, ಇನ್ನೂ ಗೆಲುವು ಕಾಣದೆ ಸತತ 8 ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಮುಂಬೈ ಇಂಡಿಯನ್ಸ್ ಪ್ಲೇಆಫ್ಸ್ ರೇಸ್ನಿಂದ ಬಹುತೇಕ ಹೊರಬಿದ್ದಿದೆ.
ಪ್ಲೇಆಫ್ಸ್ ರೇಸ್ನಲ್ಲಿರುವ ಬಲಿಷ್ಠ ತಂಡಗಳು: 2022ರ ಐಪಿಎಲ್ ಟೂರ್ನಿಯ ಪಾಯಿಂಟ್ಸ್ ಟೇಬಲ್ ಪ್ರಕಾರ, ಗುಜರಾತ್ ಟೈಟನ್ಸ್ ತಂಡ 6 ಪಂದ್ಯಗಳ ಗೆಲುವಿನೊಂದಿಗೆ 12 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ. 5 ಪಂದ್ಯಗಳ ಗೆಲುವಿನೊಂದಿಗೆ ಸನ್ರೈಸರ್ಸ್ ಹೈದರಾಬಾದ್ 10 ಅಂಕಗಳನ್ನು ಕಲೆಹಾಕಿ ಎರಡನೇ ಸ್ಥಾನ ಅಲಂಕರಿಸಿದೆ. 10 ಅಂಕಗಳೊಂದಿಗೆ ರಾಜಸ್ಥಾನ್ ರಾಯನ್ಸ್ ಮೂರನೇ ಸ್ಥಾನದಲ್ಲಿದ್ದರೆ, ಇಷ್ಟೇ ಅಂಕಗಳನ್ನು ಕಲೆಹಾಕಿರುವ ಲಖನೌ ಸೂಪರ್ ಜಯಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿವೆ.
ದೊಡ್ಡ ಅಂತರದಲ್ಲಿ ಗೆಲುವು ಅಗತ್ಯ: ಪಾಯಿಂಟ್ಸ್ ಟೇಬಲ್ನಲ್ಲಿ ಆರು ಅಂಕಗಳನ್ನು ಕಲೆ ಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಂದಿನ ಎಲ್ಲಾ ಪಂದ್ಯಗಳನ್ನು ಅತ್ಯುತ್ತಮ ರನ್ರೇಟ್ನೊಂದಿಗೆ ಗೆಲುವು ಪಡೆಯಬೇಕಾದ ಅಗತ್ಯವಿದೆ. ಇನ್ನುಳಿದ ಚೆನ್ನೈ ಸೂಪರ್ ಕಿಂಗ್ಸ್(4 ಅಂಕ) ಹಾಗೂ ಮುಂಬೈ ಇಂಡಿಯನ್ಸ್(0) ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಎರಡು ಸ್ಥಾನಗಳಿಗೆ ಕುಸಿದಿವೆ.
ಗಜರಾತ್ ಟೈಟನ್ಸ್ ಇನ್ನುಳಿದ 7 ಪಂದ್ಯಗಳಲ್ಲಿ ಗೆಲುವು ಪಡೆದರೆ 26 ಅಂಕಗಳನ್ನು ಕಲೆಹಾಕಲಿದೆ. ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇನ್ನುಳಿದ ಪಂದ್ಯಗಳನ್ನು ಗೆದ್ದರೆ 26 ಅಂಕಗಳನ್ನು ಗಳಿಸಲಿವೆ. ನಂತರ, ಆರ್ಸಿಬಿ ಮತ್ತು ಎಲ್ಎಸ್ಜಿ ಮುಂದಿನ ಪಂದ್ಯಗಳಲ್ಲಿ ಒಂದೂ ಸೋಲು ಕಾಣದೇ ಇದ್ದಲ್ಲಿ 22 ಅಂಕಗಳನ್ನು ಕಲೆ ಹಾಕಿ ಪಾಯಿಂಟ್ಸ್ ಟೇಬಲ್ನಲ್ಲಿ4ನೇ ಸ್ಥಾನ ಅಲಂಕರಿಸಲಿವೆ.
ಆರ್ಸಿಬಿಗೆ ಇನ್ನೂ 4 ಗೆಲುವು ಅಗತ್ಯ: ಇನ್ನುಳಿದ ಪಂದ್ಯಗಳನ್ನು ಗೆದ್ದರೂ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ತಂಡಗಳು 20 ಅಂಕಗಳನ್ನು ಕಲೆಹಾಕಿದರೆ, ಕೆಕೆಆರ್ ಮತ್ತು ಸಿಎಸ್ಕೆ 18 ಅಂಕ ಗಳಿಸಲಿವೆ. ಈ ಅಂಕಿ ಅಂಶಗಳ ಪ್ರಕಾರ ಗುಜರಾತ್, ರಾಜಸ್ಥಾನ್, ಹೈದರಾಬಾದ್ ತಂಡಗಳು ಸುಲಭವಾಗಿ ಪ್ಲೇಆಫ್ಸ್ ತಲುಪಲಿವೆ. ಆದರೆ, ಆರ್ಸಿಬಿ, ಲಖನೌ ಹಾಗೂ ಡೆಲ್ಲಿ ತಂಡಗಳು ಇನ್ನೂ ಕನಿಷ್ಠ 4 ಪಂದ್ಯಗಳಲ್ಲಿ ಗೆಲುವು ಪಡೆಯಬೇಕಾದ ಅಗತ್ಯವಿದೆ. ಮತ್ತೊಂದೆಡೆ ಪಂಜಾಬ್ ಮತ್ತು ಚೆನ್ನೈ ಪಾಲಿಗೆ ಮುಂದಿನ ಪಂದ್ಯಗಳು ತುಂಬಾ ಮುಖ್ಯವಾಗಿವೆ.
Ipl 2022 Royal Challengers Bangalore Still How Many Matches Should Win, All You Need To Know Possible Playoff Scenarios.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm